
ಮಧ್ಯ ಪ್ರದೇಶ: ಸಿಮೆಂಟ್ ಲಾರಿಯೊಂದು ವ್ಯಾನ್ ಮೇಲೆ ಬಿದ್ದ ಪರಿಣಾಮ ಒಂದೇ ಕುಟುಂಬದ 9 ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಜಬುವಾ ಬಳಿ ಮಧ್ಯಾರಾತ್ರಿ 2:30ಕ್ಕೆ ನಡೆದಿದೆ.
ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಕುಟುಂಬವೊಂದು ವ್ಯಾನ್ನಲ್ಲಿ ತೆರಳುತ್ತಿತ್ತು. ಅದೇ ಮಾರ್ಗವಾಗಿ ಸಂಚರಿಸುತ್ತಿದ್ದ ಸಿಮೆಂಟ್ ಲಾರಿಯೊಂದು ನಿಯಂತ್ರಣ ತಪ್ಪಿ ವ್ಯಾನ್ ಮೇಲೆ ಬಿದ್ದಿದೆ. ಪರಿಣಾಮ ಸ್ಥಳದಲ್ಲೇ 9 ಮಂದಿ ಪ್ರಾಣ ಕಳೆದುಕೊಂಡಿದ್ದು, ಇಬ್ಬರಿಗೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದೆ.