
ತುಮಕೂರು: ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ (Hemavati Link Canal Project) ವಿರೋಧಿಸಿ ಪ್ರತಿಭಟಿಸಿದ್ದವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಹೋರಾಟಗಾರರ ವಿರುದ್ಧ ಎಫ್ಐಆರ್ ದಾಖಲಿಸಿರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಕೇಂದ್ರ ಸಚಿವ ಹಾಗು ತುಮಕೂರು ಸಂಸದ ವಿ.ಸೋಮಣ್ಣ ಕರ್ನಾಟಕ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಚುನಾಯಿತ ಪ್ರತಿನಿಧಿಗಳು ಹಾಗೂ ಸ್ವಾಮೀಜಿಗಳು ಸೇರಿದಂತೆ ಇತರರ ಮೇಲೆ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯುವಂತೆ ಆಗ್ರಹಿಸಿದ್ದಾರೆ.
ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಯೋಜನೆಯಿಂದ ತುಮಕೂರು ಪ್ರದೇಶದ ರೈತರಿಗೆ ಅನ್ಯಾಯವಾಗುತ್ತದೆ. ಹೀಗಾಗಿ ಯೋಜನೆಯನ್ನು ನಿಲ್ಲಿಸಬೇಕು ಎಂದು ಕೇಂದ್ರ ಸಚಿವ ಹಾಗು ತುಮಕೂರು ಸಂಸದ ವಿ.ಸೋಮಣ್ಣ ಆಗ್ರಹಿಸಿದ್ದಾರೆ. ಈ ಹಿಂದೈೇ ರಾಜ್ಯ ಸರ್ಕಾರಕ್ಕೆ ಯೋಜನೆಯನ್ನು ಅನುಷ್ಠಾನ ಮಾಡಬಾರದು ಎಂದು ಮನವಿ ಮಾಡಿದ್ದೆ. ಆದ್ರೆ ಸರ್ಕಾರ ಈ ಯೋಜನೆಯನ್ನು ನಿಲ್ಲಿಸಲಿಲ್ಲ ಎಂದು ವಿ.ಸೋಮಣ್ಣ ಆಕ್ರೋಶ ಹೊರಹಾಕಿದ್ದಾರೆ.
ಹೇಮಾವತಿ ಎಕ್ಸ್ಪ್ರೆಸ್ ಕೆನಾಲ್ ಯೋಜನೆಯ ಸಾಧಕ ಬಾಧಕಗಳನ್ನು ಚರ್ಚೆ ಮಾಡಲು ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಸಭೆ ಮಾಡಬೇಕು. ಅಲ್ಲೇ ಯೋಜನೆಯ ಎರಡು ಕಡೆಯ ತಜ್ಞರನ್ನು ಕೂಡ ಸಭೆಗೆ ಆಹ್ವಾನಿಸಬೇಕು ಎಂದು ಆಗ್ರಹಿಸಿದ್ದಾರೆ.