
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಾಗರೋಪಾದಿಯಲ್ಲಿ ಸೇರುತ್ತಿದ್ದು, ದುರಂತವೇ ಸಂಭವಿಸಿದೆ.
ಆರ್ಸಿಬಿ ಆಟಗಾರರನ್ನು ನೋಡಲು ಜನ ಸೇರುತ್ತಿದ್ದು, ಕಾಲ್ತುಳಿತ ಸಂಭವಿಸಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಈ ವೇಳೆ ಬಾಲಕನೊಬ್ಬನಿಗೆ ಹೃದಯಾಘಾತವಾಗಿದ್ದು, ಸಾವನ್ನಪ್ಪಿದ್ದಾನೆ ಎನ್ನಲಾಗುತ್ತಿದೆ. ಸದ್ಯ ಕಾಲ್ತುಳಿತದಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಾಯಿದೆ.