
ಬೆಂಗಳೂರು: ಆರ್ಸಿಬಿ ವಿಜಯೋತ್ಸವಕ್ಕೆ ಬಂದಿದ್ದ ಜನಸಾಗರದಿಂದ ಕಾಲ್ತುಳಿತ ಸಂಭವಿಸಿದೆ. ಭೀಕರ ಕಾಲ್ತುಳಿತದಿಂದ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. 7 ಮಂದಿ ಬೌರಿಂಗ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ್ರೆ, ನಾಲ್ವರು ವೈದೇಹಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ
ನಿನ್ನೆ ಐಪಿಎಲ್ ಫೈನಲ್ಸ್ನಲ್ಲಿ ಆರ್ಸಿಬಿ ರೋಚಕವಾಗಿ ಗೆದ್ದಿತ್ತು. ಇಂದು ಬೆಂಗಳೂರಿನಲ್ಲಿ ಆರ್ಸಿಬಿ ವಿಜಯೋತ್ಸವ ಏರ್ಪಡಿಸಲಾಗಿತ್ತು. ನೆಚ್ಚಿನ ಆಟಗಾರರನ್ನು ನೋಡಲು ಸಾಗರೋಪಾದಿಯಲ್ಲಿ ಜನ ಸೇರಿದ್ದ ಕಾರಣ ಕಾಲ್ತುಳಿತವಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜಮಾಯಿಸಿರುವ ಅಭಿಮಾನಿಗಳು ನೂಕುನುಗ್ಗಲಿನಲ್ಲಿ ಸ್ಟೇಡಿಯಂ ಗೇಟ್ ಕೂಡ ಮುರಿದು ಹಾಕಿದ್ದಾರೆ.
ಇನ್ನೂ ಸ್ಟೇಡಿಯಂ ಬಳಿ ನೂಕುನುಗ್ಗಲು ಉಂಟಾಗಿ ಕಾಲ್ತುಳಿತವಾಗಿದೆ. 11 ಮಂದಿ ಮೃತಪಟ್ಟಿದ್ದು, 50ಕ್ಕೂ ಹೆಚ್ಚು ಜನಕ್ಕೆ ಗಂಭೀರವಾಗಿ ಗಾಯವಾಗಿದ್ದು, ಬೌರಿಂಗ್ ಆಸ್ಪತ್ರೆ ಹಾಗು ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿದೆ.