
ಬೆಂಗಳೂರು: 18ನೇ ಆವೃತ್ತಿಯ ಐಪಿಎಲ್ ಟ್ರೋಫಿಯನ್ನು ಆರ್ಸಿಬಿ ಗೆದ್ದಿದ್ದು, ಇದೀಗ ತವರಿಗೆ ಆಗಮಿಸಿದ್ದಾರೆ. ವಿಶೇಷ ವಿಮಾನದಲ್ಲಿ ಅಹಮದಾಬಾದ್ನಿಂದ ಬೆಂಗಳೂರಿಗೆ ಬಂದ ಆಟಗಾರರನ್ನು ಆರ್ಸಿಬಿ ಫ್ಯಾನ್ಸ್ ಸಂಭ್ರಮದಿಂದ ಬರ ಮಾಡಿಕೊಂಡಿದ್ದಾರೆ.
ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಆರ್ಸಿಬಿ ಆಟಗಾರರನ್ನು ಡಿಸಿಎಂ ಡಿ.ಕೆ ಶಿವಕುಮಾರ್ ಸ್ವಾಗತ ಮಾಡಿದ್ರು. ಈ ವೇಳೆ ಆರ್ಸಿಬಿ ಆಟಗಾರ ವಿರಾಟ್ ಕೊಹ್ಲಿಗೆ ಕನ್ನಡದ ಬಾವುಟ ನೀಡಿದರು.ಹೆಚ್ಎಎಲ್ ಸುತ್ತಮುತ್ತ ಆರ್ಸಿಬಿ ಫ್ಯಾನ್ಸ್ ಘೋಷಣೆ ಕೂಗಿ ಸ್ವಾಗತಿಸಿದರು.
ಮಂಗಳವಾರ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಪಂಜಾಬ್ ವಿರುದ್ಧದ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು 6 ರನ್ಗಳ ರೋಚಕ ಜಯ ಸಾಧಿಸಿತು. 18 ವರ್ಷಗಳ ಬಳಿಕ ಚೊಚ್ಚಲ ಐಪಿಎಲ್ ಟ್ರೋಫಿ ಎತ್ತಿ ಹಿಡಿಯಿತು. ಆರ್ಸಿಬಿ ಅಭಿಮಾನಿಗಳ ಪಾಲಿಗೆ ಇದು ನಿಜಕ್ಕೂ ಐತಿಹಾಸಿಕ ಕ್ಷಣವಾಗಿತ್ತು.