
ಬೆಂಗಳೂರು: 18 ವರ್ಷದ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕಪ್ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಕಪ್ ಎತ್ತಿಹಿಡಿದ ಆರ್ಸಿಬಿ ತಂಡ ಇವತ್ತು ಅಭಿಮಾನಿಗಳ ಜೊತೆ ವಿಜಯೋತ್ಸವ ಆಚರಿಸಲು ಬೆಂಗಳೂರಿಗೆ ಬರುತ್ತಿದ್ದಾರೆ. ಅಹಮದಾಬಾದ್ನಿಂದ ವಿಶೇಷ ವಿಮಾನದಲ್ಲಿ ಹೊರಡಲಿರುವ ಆಟಗಾರರು, ಮಧ್ಯಾಹ್ನ 1:30 ವೇಳೆಗೆ ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ ಎನ್ನಲಾಗಿದೆ.
ಎಚ್ಎಎಲ್ ವಿಮಾನ ನಿಲ್ದಾಣದಿಂದ ಆರ್ಸಿಬಿ ತಂಡ ತಾಜ್ ವೆಸ್ಟೆಂಡ್ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ವಿಶ್ರಾಂತಿ ಬಳಿಕ ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಿದ್ದಾರೆ. ಸಿಎಂ ಭೇಟಿ ಬಳಿಕ ಸಂಜೆ 5 ಗಂಟೆಗೆ ವಿಧಾನಸೌಧದಿಂದ ಚಿನ್ನಸ್ವಾಮಿ ಕ್ರೀಡಾಂಗಣದವರೆಗೆ ಸುಮಾರು 1 ಕಿ.ಮೀ ಓಪನ್ ಬಸ್ ಮೂಲಕ ವಿಜಯೋತ್ಸವದ ಮೆರವಣಿಗೆ ನಡೆಯುತ್ತದೆ.
ಸಂಜೆ 6 ಗಂಟೆಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಾಚರಣೆ ನಡೆಯಲಿದ್ದು, ಸಾವಿರಾರು ಸಂಖ್ಯೆಯಲ್ಲಿ ಆರ್ಸಿಬಿ ಫ್ಯಾನ್ಸ್ ಭಾಗಿಯಾಗಲಿದ್ದಾರೆ.